ರಂಗೇರಿದ ಚುನಾವಣಾ ರಣಾಂಗಣ: ಆಪರೇಷನ್ ಹಸ್ತ ಯಶಸ್ವಿ; ಬಿಜೆಪಿಗೆ ಮತ್ತೊಂದು ಬಿಗ್ ಶಾಕ್
ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಕುರಿತು ಪಕ್ಷದ ವಿರುದ್ಧ ಬಂಡಾಯ ಸಾರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಅವರು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ರವಿವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಶಿರಸಿಗೆ ತೆರಳಿ ಸ್ಪೀಕರ್ ರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈತಪ್ಪುವುದು ಖಚಿತವಾಗುತ್ತಿದ್ದಂತೆ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶನಿವಾರ ರಾತ್ರಿ ಘೋಷಿಸಿದ್ದರು.
ಶೆಟ್ಟರ್ ಮನವೊಲಿಕೆಗೆ ಕೇಂದ್ರ ಸಹಿತ ರಾಜ್ಯ ನಾಯಕರು ಕೆಲವು ದಿನಗಳಿಂದ ಪ್ರಯತ್ನಿಸಿದ್ದರು. ಆದರೆ ಬಿಜೆಪಿ ನಾಯಕರ ಪ್ರಯತ್ನ ವಿಫಲವಾಗಿದೆ.
ಈ ಸಂದರ್ಭ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲಾ, ಎಂ.ಬಿ. ಪಾಟೀಲ್ ಸಹಿತ ಹಲವು ನಾಯಕರು ಉಪಸ್ಥಿತರಿದ್ದರು.