ಅವುರ್ ಏಕ್ ಬಾರ್ ಸಿದ್ದು ಸರ್ಕಾರ್- ಇಂದು ಮಧ್ಯಾಹ್ನ 12.30 ಕ್ಕೆ ಪ್ರಮಾಣವಚನ

ಅವುರ್ ಏಕ್ ಬಾರ್ ಸಿದ್ದು ಸರ್ಕಾರ್- ಇಂದು ಮಧ್ಯಾಹ್ನ 12.30 ಕ್ಕೆ ಪ್ರಮಾಣವಚನ


ಬೆಂಗಳೂರು: ಇಂದ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಲಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಯಾರಿಗೆಲ್ಲ ಆಹ್ವಾನ?

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸಗಢದ ಮುಖ್ಯಮಂತ್ರಿ ಭೂಪೇಶ್ ಬಗೇಲ್, ಬಿಹಾರ್‌ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು, ಪುದಿಚೆರಿ ಸಿಎಂ ಎನ್.ರಂಗಸ್ವಾಮಿ, ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಅವರನ್ನು ಆಹ್ವಾನಿಸಲಾಗಿದೆ.

ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ದತೆ

ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಜೊತೆಗೆ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಹೀಗಾಗಿ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದತೆ ಕೈಗೊಳ್ಳಲಾಗಿದೆ. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಅದಕ್ಕೆ ತಕ್ಕಂತೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೀಡಾಂಗಣದಲ್ಲಿ ಸುಮಾರು 35 ಸಾವಿರ ಸೀಟುಗಳ ವ್ಯವಸ್ಥೆ ಇದ್ದು, ಇದರಲ್ಲಿ ಗಣ್ಯರು, ಜನಪ್ರತಿನಿಧಿಗಳು ಹಾಗೂ ಆಹ್ವನಿತರಿಗೆ ಅವಕಾಶ ನೀಡಿ,ಉಳಿದ ಜಾಗದಲ್ಲಿ ಸಾರ್ವಜನಿಕರು ಕೂರಲು ವ್ಯವಸ್ಥೆ ಮಾಡಲಾಗುತ್ತದೆ. ಕಾರ್ಯಕ್ರಮಕ್ಕೆ 1 ಲಕ್ಷ ಮಂದಿ ಆಗಮಿಸುವ ಸಾಧ್ಯತೆ ಇದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Previous Post Next Post