ವಿಧಾನಸಭೆ ಚುನಾವಣೆ: ಕರ್ನಾಟಕ ಜನತೆಯ ಮಹಾ ತೀರ್ಪಿಗೆ ಕೌಂಟ್ ಡೌನ್, ಎಂಟು ಗಂಟೆಯಿಂದ ಮತ ಎಣಿಕೆ
ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಮುಗಿದು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.
ಮಧ್ಯಾಹ್ನ 12 ಗಂಟೆಗೆ ಹೊತ್ತಿಗೆ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಸ್ಪಷ್ಟ ಚಿತ್ರಣ ಹೊರಬರಲಿದೆ. ಸಂಜೆ ವೇಳೆಗೆ ಪೂರ್ಣ ಫಲಿತಾಂಶ ಪ್ರಕಟವಾಗಲಿದೆ. ಹಲವು ಸುತ್ತುಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳು, ಅಂಚೆ ಮತಗಳ ಲೆಕ್ಕ ಹಾಕಲಾಗುತ್ತದೆ.
ಮತ ಎಣಿಕೆ ಕೇಂದ್ರಗಳು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 34 ಕೇಂದ್ರಗಳಲ್ಲಿ ಏಕಕಾಲಕ್ಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತ ಯಂತ್ರಗಳನ್ನು ಭದ್ರವಾಗಿ ಇಡಲಾಗಿದ್ದು, ಸ್ಟ್ರಾಂಗ್ ರೂಂಗಳಲ್ಲಿ 3 ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬೆಂಗಳೂರಿನಲ್ಲಿ ಬಿಗಿ ಭದ್ರತೆ: 28 ವಿಧಾನಸಭೆ ಕ್ಷೇತ್ರ ಹೊಂದಿರುವ ಬೆಂಗಳೂರು ನಗರದಲ್ಲಿ ನಾಳೆ ಮತ ಎಣಿಕೆ ಸಂದರ್ಭದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 10 ಡಿಸಿಪಿಗಳು ಮತ್ತು ಇತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸುವುದರೊಂದಿಗೆ ನಗರದ ಎಲ್ಲಾ ಐದು ಎಣಿಕೆ ಕೇಂದ್ರಗಳಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

ನಾನೇ ಸಿಎಂ ನಮ್ದೇ ಸರಕಾರ: ಮೈತ್ರಿಗೆ ಒಂಬತ್ತು ಷರತ್ತು ಹಾಕಿದ ಹೆಚ್ ಡಿಕೆ
ಈ ಮೂಲಕ ನಾನೇ ಸಿಎಂ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದರ ಜೊತೆಗೆ ಇನ್ನೂ 9 ಕಂಡೀಷನ್ ಹಾಕಿದ್ದಾರೆ. ಇತ್ತ ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಮಹತ್ವದ ಸೂಚನೆ ನೀಡಿದ್ದಾರೆ. ಮತ ಎಣಿಕೆಯಲ್ಲಿ ಲೀಡ್ ಬರುತ್ತಿದ್ದಂತೆ ಬೆಂಗಳೂರಿಗೆ ಬರಲು ಸೂಚನೆ ನೀಡಲಾಗಿದೆ. ತಾವು ಹೇಳಿದ ಸ್ಥಳಕ್ಕೆ ಬಂದು ಸೇರಲು ಸೂಚಿಸಲಾಗಿದೆ. ಪಕ್ಷದ ಗೆಲುವಿನ ಅಭ್ಯರ್ಥಿಗಳನ್ನು ಯಾರು ಸೆಳೆಯದಂತೆ ನೋಡಿಕೊಳ್ಳಲು ಪ್ಲಾನ್ ಮಾಡಲಾಗಿದೆ.