ಕಾಂಗ್ರೆಸ್ ನಲ್ಲಿ ಗರಿಗೆದರಿದ ಚಟುವಟಿಕೆ: ಇಂದು ಸಂಜೆ ಶಾಸಕರ ಸಭೆ, ದೆಹಲಿಗೆ ಹೊರಟ ಖರ್ಗೆ

ಕಾಂಗ್ರೆಸ್ ನಲ್ಲಿ ಗರಿಗೆದರಿದ ಚಟುವಟಿಕೆ: ಇಂದು ಸಂಜೆ ಶಾಸಕರ ಸಭೆ, ದೆಹಲಿಗೆ ಹೊರಟ ಖರ್ಗೆ


ಬೆಂಗಳೂರು: ನೂತನವಾಗಿ ಆಯ್ಕೆಯಾದ ಕಾಂಗ್ರೆಸ್‌ ಶಾಸಕರ (ಸಿಎಲ್‌ಪಿ) ಸಭೆ ಇಂದು ಸಂಜೆ 6 ಗಂಟೆಗೆ ವಸಂತನಗರದಲ್ಲಿರುವ ಶಾಂಗ್ರಿ-ಲಾ ಹೋಟೆಲ್‌ನಲ್ಲಿ ನಡೆಯಲಿದೆ.

ಈ ಮಧ್ಯೆ, ಮಧ್ಯಾಹ್ನ 1.30ರ ವಿಮಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಲಿದ್ದಾರೆ. ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿರುವ ಬೆನ್ನಲ್ಲೆ ಅವರು, ದೆಹಲಿಗೆ ತೆರಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಸಿಎಲ್‌ಪಿ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್‌ ಸದಸ್ಯರು ಮತ್ತು ಸಂಸದರು ಭಾಗವಹಿಸಬೇಕು ಎಂದು ಕೆಪಿಸಿಸಿಯಿಂದ ಸಂದೇಶ ಕಳುಹಿಸಲಾಗಿದೆ. ಇಂದು ಮುಖ್ಯಮಂತ್ರಿ ಆಯ್ಕೆಯ ಸಾದ್ಯತೆ ಇದೆ ಎಂದು ಹೇಳಲಾಗಿದೆ.


Previous Post Next Post