ನಾವು ಒಗ್ಗಟ್ಟಾಗಿದ್ದೇವೆ : ಸಿದ್ದರಾಮಯ್ಯ ಜೊತೆಗಿನ ಫೋಟೊ ಹಂಚಿಕೊಂಡ ಡಿಕೆಶಿ

ನಾವು ಒಗ್ಗಟ್ಟಾಗಿದ್ದೇವೆ : ಸಿದ್ದರಾಮಯ್ಯ ಜೊತೆಗಿನ ಫೋಟೊ ಹಂಚಿಕೊಂಡ ಡಿಕೆಶಿ


'ಕರ್ನಾಟಕದ ಸುಭದ್ರ ಭವಿಷ್ಯ ಮತ್ತು ನಮ್ಮ ಜನರ ಕಲ್ಯಾಣ ನಮ್ಮ ಮೊದಲ ಆದ್ಯತೆಯಾಗಿದೆ, ಮತ್ತು ಅದನ್ನು ಖಾತರಿಪಡಿಸುವಲ್ಲಿ ನಾವು ಒಗ್ಗಟ್ಟಾಗಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೆಳಿದ್ದಾರೆ.

ಕರ್ನಾಟಕದ ಏಕೈಕ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಮಾಡಿದ ಮೊದಲ ಟ್ವೀಟ್ ನಲ್ಲಿ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಫೋಟೋ ಹಂಚಿಕೊಳ್ಳುವ ಮೂಲಕ ಈ ಸಂದೇಶವನ್ನು ನೀಡಿದ್ದಾರೆ.

ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ: ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ 


ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಹಾಗೂ ಏಕೈಕ ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಗುರುವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಟ್ವೀಟ್ ಮಾಡಿರುವ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ''ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.


ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ'' ಎಂದು ಭರವಸೆ ನೀಡಿದ್ದಾರೆ.

Previous Post Next Post