ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಪರ್ವ ಶುರು

ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಪರ್ವ ಶುರು


ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ 8 ಮಂದಿ ಶಾಸಕರು ಸಚಿವರಾಗಿ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 8 ಮಂದಿ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿದ್ದಾರೆ.


ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ಮಾತನಾಡಿದ ರಾಹುಲ್ ಗಾಂಧಿ, ರಾಜ್ಯದ ಜನತೆಗೆ ನನ್ನ ಕಡೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಧನ್ಯವಾದಗಳನ್ನು ತಿಳಿಸುತ್ತೇನೆ. ನಿವೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣವಾಗಿ ಬಹುಮತ ಬಂದಿದೆ. ನಾವು ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನಡೆಸುತ್ತೇವೆ. ನಾವು ಕೊಟ್ಟ ಗ್ಯಾರಂಟಿ ಘೋಷಣೆಗಳನ್ನು ಜಾರಿಗೆ ತರುತ್ತೇವೆ.


ಎಂಟು ಸಚಿವರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರ: ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಗಂಗಾಧರ ಅಜ್ಜಯನ ಹೆಸರಿನಲ್ಲಿ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಬಳಿಕ, 8 ಮಂದಿ ಶಾಸಕರ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.


ಸರಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ 

ಮುಂದಿನ ಸಚಿವ ಸಂಪುಟ ಸಭೆ ನಂತರ ಪಂಚ ಯೋಜನೆಗಳ ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಎಲ್ಲ ಸದಸ್ಯರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ತೀರ್ಮಾನಗಳನ್ನು ಪ್ರಕಟಿಸಿದರು.

ಎಲ್ಲಾ ಸರ್ಕಾರಿ ಬಸ್​ನಲ್ಲಿ ಪ್ರಯಾಣಿಸುವ ಕರ್ನಾಟಕದ ಮಹಿಳೆಯರಿಗೆ ಫ್ರೀ ಪಾಸ್ ನೀಡಲಾಗುವುದು, ಬೇರೆ ರಾಜ್ಯಗಳ ಮಹಿಳೆಯರಿಗೆ ಈ ಭಾಗ್ಯ ಇರುವುದಿಲ್ಲ. ಐಷಾರಾಮಿ ಬಸ್ ಗಳಲ್ಲಿ ಅವಕಾಶ ಇರುವುದಿಲ್ಲ, ರಾಜ್ಯದ ಮಹಿಳೆಯರಿಗೆ ಮಾತ್ರ ಉಚಿತ ಬಸ್​ ಪ್ರಯಾಣ ಅನ್ವಯ ಎಂದರು.


Previous Post Next Post