ಇಂದಿನಿಂದ ಮೂರು ದಿನಗಳ ಕಾಲ ವಿಧಾನ ಸಭೆಯ ವಿಶೇಷ ಅಧಿವೇಶನ

ಇಂದಿನಿಂದ ಮೂರು ದಿನಗಳ ಕಾಲ ವಿಧಾನ ಸಭೆಯ ವಿಶೇಷ ಅಧಿವೇಶನ 


ಇಂದಿನಿಂದ ಮೇ.24ರವರೆಗೆ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲದ ಅಧಿವೇಶನವನ್ನು ಕರೆಯಲಾಗಿದೆ. ಈ ಅಧಿವೇಶನದಲ್ಲಿ ಶಾಸಕರಾಗಿ ಆಯ್ಕೆಯಾಗಿರುವಂತವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ವಿಧಾನಸೌಧದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.


ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭೆಯ ವಿಶೇಷ ಅಧಿವೇಶನ ನಡೆಯಲಿದೆ. ಇದಕ್ಕಾಗಿ ವಿಧಾನಸಭೆ ಸಚಿವಾಲಯ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಶಾಸಕರ ಪ್ರಮಾಣ ವಚನ ಕಾರ್ಯಕ್ರಮಕ್ಕಾಗಿ ಹಂಗಾಮಿ ಸ್ವೀಕರ್ ಆಗಿ ಶಾಸಕ ಆರ್ ವಿ ದೇಶಪಾಂಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಮೇ.24ರಂದು ವಿಧಾನಸಭೆಯ ನೂತನ ಸ್ವೀಕರ್ ಆಯ್ಕೆಗಾಗಿ ಚುನಾವಣೆಯನ್ನು ನಿಗದಿ ಪಡಿಸಲಾಗಿದೆ. ಸ್ವೀಕರ್ ರೇಸ್ ನಲ್ಲಿ ಹೆಚ್ ಕೆ ಪಾಟೀಲ್, ಟಿ.ಬಿ ಜಯಚಂದ್ರ, ಕೆ.ಎನ್ ರಾಜಣ್ಣ ಹಾಗೂ ಹಂಗಾಮಿ ಸ್ವೀಕರ್ ಆರ್ ವಿ ದೇಶಪಾಂಡೆ ಹೆಸರು ಕೇಳಿ ಬಂದಿದೆ. ಇವರಲ್ಲಿ ಒಬ್ಬರನ್ನು ವಿಧಾನಸಭೆಯ ಸಭಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುತ್ತದೆ.

Previous Post Next Post