ಅಚ್ಚರಿ ಆಯ್ಕೆ: ಕರ್ನಾಟಕ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಕೆ

ಅಚ್ಚರಿ ಆಯ್ಕೆ: ಕರ್ನಾಟಕ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಕೆ


ಅಚ್ಚರಿಯ ರೀತಿಯಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದೆ. ಸದ್ಯ ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಸ್ಪೀಕರ್ ಹುದ್ದೆಗೆ ಸಂಬಂಧಿಸಿ ಹಲವು ಹಿರಿಯರ ಹೆಸರು ಕೇಳಿಬಂದಿತ್ತು. ಗದಗ ಶಾಸಕ ಎಚ್.ಕೆ ಪಾಟೀಲ್, ಶಿರಾ ಶಾಸಕ ಟಿ.ಬಿ ಜಯಚಂದ್ರ, ಮಧುಗಿರಿ ಶಾಸಕ ಕೆ.ಎನ್ ರಾಜಣ್ಣ ಮತ್ತು ಮುದ್ದೇಬಿಹಾಳ ಶಾಸಕ ಸಿ.ಎಸ್ ಅಪ್ಪಾಜಿ ನಾಡಗೌಡ ಅವರ ಹೆಸರುಗಳು ಚರ್ಚೆಯಲ್ಲಿತ್ತು. ಆದರೆ ಈ ಹಿರಿಯ ಶಾಸಕರು ಮಂತ್ರಿ ಹುದ್ದೆಗೆ ಪಟ್ಟು ಹಿಡಿದಿದ್ದರು.

ಇದೀಗ ಅಚ್ಚರಿಯ ರೀತಿಯಲ್ಲಿ ಯು.ಟಿ ಖಾದರ್ ಹೆಸರು ಅಂತಿಮವಾಗಿದೆ. ಸೋಮವಾರ ರಾತ್ರಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರೆ ಮಾಡಿ ಸ್ಪೀಕರ್ ಸ್ಥಾನ ಒಪ್ಪುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಖಾದರ್ ಕೂಡಾ ತನ್ನ ಒಪ್ಪಿಗೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ. 


ಬುಧವಾರ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಇಂದು ಖಾದರ್ ಉಮೇದುವಾರಿಕೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯ್ಕೆಯಾದ ಕೇವಲ ಇಬ್ಬರು ಕಾಂಗ್ರೆಸ್ ಶಾಸಕರಲ್ಲಿ ಖಾದರ್ ಒಬ್ಬರು. ಕಳೆದ ಸಿದ್ದರಾಮಯ್ಯ ಸರ್ಕಾರದಲ್ಲಿ ಯು ಟಿ ಖಾದರ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ, ನಗರಾಭಿವೃದ್ಧಿ ಮತ್ತು ವಸತಿ ಖಾತೆ ನಿರ್ವಹಿಸಿದ ಅನುಭವ ಹೊಂದಿದ್ದಾರೆ.


Previous Post Next Post