ಯೂಟಿ ಖಾದರ್ ಫರೀದ್ ಇನ್ನು ವಿಧಾನಸಭಾ ಸ್ಪೀಕರ್
ಬೆಂಗಳೂರು: ವಿಧಾನಸಭೆ ನೂತನ ಸ್ಪೀಕರ್ ಆಗಿ ಯುಟಿ ಖಾದರ್ ಅವಿರೋಧ ಆಯ್ಕೆಯಾಗಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ ಮಾತ್ರ ನಾಮಪತ್ರವನ್ನು ಸಲ್ಲಿಸಿದ್ದರು, ಹೀಗಾಗಿ ಅವರು ಇಂದು ಅಧಿಕೃತವಾಗಿ ಸ್ಪೀಕರ್ ಆಗಿ ಅಧಿಕಾರ ಸ್ವೀಕಾರವನ್ನು ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಅವರಿಂದ ಸ್ವೀಕಾರ ಮಾಡಿದರು. ಇದೇ ವೇಳೆ ನೂತನ ಸ್ಪೀಕರ್‌ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದರು.
ಯೂಟಿ ಖಾದರ್ ಅವರನ್ನು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಲು, ಹಾಗು ಮಾಜಿ ಸಿಎಂ ಬೊಮ್ಮಾಯಿ ಅವರುಗಳು ಸೇರಿ ಅಧ್ಯಕ್ಷ ಪೀಠಕ್ಕೆ ಕರೆದುಕೊಂಡು ಹೋಗಿ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿದರು.
ಇನ್ನೂ ಯುಟಿ ಕಾದರ್ ಅವರು ಉಳ್ಳಾಲ ವಿಧಾನಸಭೆಯಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಸಿಎಂ ಆಗಿದ್ದ ವೇಳೆಯಲ್ಲಿ ಯುಟಿ ಖಾದರ್ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಮಾತ್ರವಲ್ಲ ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯುಟಿ ಖಾದರ್ ಅವರು ಉಪ ವಿ.ಪ ನಾಯಕನಾಗಿ ಕಾರ್ಯನಿರ್ವಹಿಸಿದ್ದರು.