ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜಿನಾಮೆ
ಬೆಂಗಳೂರು, ಮೇ 13: ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಹೀನಾಯ ಸೋಲು ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಲಿದ್ದಾರೆ.
ಹಾವೇರಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರಿಗೆ ಆಗಮಿಸಿದ ಕೂಡಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ಬೈರತಿ ಬಸವರಾಜ್, ಸುರೇಶ್ ಕುಮಾರ್ , ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಜರಿದ್ದರು.
ಬೊಮ್ಮಾಯಿ ನೇತೃತ್ವ 13 ಸಚಿವರಿಗೆ ಸೋಲು: ಬಿಜೆಪಿಗೆ ತೀವ್ರ ಮುಖಭಂಗ!!
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದ 13 ಸಚಿವರು ಸೋಲಿನ ರುಚಿ ನೋಡಿದ್ದು, ಆಡಳಿತಾರೂಢ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ.
ಬಸವರಾಜ ಬೊಮ್ಮಾಯಿ ಸರಕಾರದ ಪ್ರಭಾವಿ ಸಚಿವರಾಗಿದ್ದ ಗೋವಿಂದ ಎಂ.ಕಾರಜೋಳ, ಡಾ.ಕೆ.ಸುಧಾಕರ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಜೆ.ಸಿ.ಮಾಧುಸ್ವಾಮಿ, ಮುರುಗೇಶ್ ಆರ್.ನಿರಾಣಿ ಮತ್ತು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಪ್ರಮುಖರು ಸೋಲನುಭವಿಸಿದ್ದಾರೆ. ಒಟ್ಟು ಹದಿಮೂರು ಸಚಿವರು ಸೋಲಿನ ರುಚಿ ಕಂಡಿದ್ದಾರೆ.