ಸಿಎಂ ಗದ್ದುಗೆ ಯಾರಿಗೆ!!?? ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭ

ಸಿಎಂ ಗದ್ದುಗೆ ಯಾರಿಗೆ!!?? ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭ

ಬೆಂಗಳೂರು: ಅಮೋಘ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಪಕ್ಷದ ಸಭೆ ಭಾನುವಾರ ಸಂಜೆ ಶಾಂಗ್ರಿಲಾ ಹೋಟೆಲ್‌ನಲ್ಲಿ ಆರಂಭವಾಗಿದೆ.

ಎಐಸಿಸಿ ವೀಕ್ಷಕರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ, ಪ್ರಧಾನ ಕಾರ್ಯದರ್ಶಿ ಜಿತೇಂದರ್ ಸಿಂಗ್, ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಾಬರಿಯಾ ಅವರು ಸಭೆಯಲ್ಲಿ ಹಾಜರಾಗಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷದಿಂದ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯುತಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿಯಿಂದ ಮೂವರು ವೀಕ್ಷಕರನ್ನು ನೇಮಕ ಮಾಡಲಾಗಿದೆ. ರಾಜ್ಯದ ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಆಯ್ಕೆ ಕುರಿತು ನೀಡಿದ ವರದಿಯನ್ನು ಹೈಕಮಾಂಡ್ ಗೆ ವೀಕ್ಷಕರು ನೀಡಲಿದ್ದಾರೆ.


Previous Post Next Post