ಆಡಳಿತ ಯಂತ್ರಕ್ಕೆ ಚುರುಕು: ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಿಎಂ ಡಿಸಿಎಂ ಮಹತ್ವದ ಸಭೆ

ಆಡಳಿತ ಯಂತ್ರಕ್ಕೆ ಚುರುಕು: ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಿಎಂ ಡಿಸಿಎಂ ಮಹತ್ವದ ಸಭೆ


ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ನಂತ್ರ, ಈಗ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸದಲ್ಲಿ ನಿರತರಾಗಿದ್ದಾರೆ. ಈ ನಿಟ್ಟಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಯನ್ನು ಕೂಡ ನಡೆಸಿದರು.

ಬೆಂಗಳೂರಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಉನ್ನತ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.


ಈ ಸಭೆಯಲ್ಲಿ ಸಚಿವರಾದ ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ಡಿಜಿಪಿ ಅಲೋಕ್ ಮೋಹನ್ ಉಪಸ್ಥಿತರಿದ್ದರು.

Previous Post Next Post