ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಜೆಡಿಎಸ್ ಸಂಪೂರ್ಣ ಬೆಂಬಲ: ಹೆಚ್ ಡಿಕೆ ಘೋಷಣೆ

ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಜೆಡಿಎಸ್ ಸಂಪೂರ್ಣ ಬೆಂಬಲ: ಹೆಚ್ ಡಿಕೆ ಘೋಷಣೆ 


ಬೆಂಗಳೂರು: ನಿನ್ನೆ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಅವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಶುಭಾಶಯಗಳನ್ನು ತಿಳಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಜೆಡಿಎಸ್ ನಿಂದ ಪರಿಪೂರ್ಣ ಬೆಂಬಲವನ್ನು ಘೋಷಿಸಿದ್ದಾರೆ.


ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜನತಾದಳ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ.

Previous Post Next Post