ಕರ್ನಾಟಕ ಸಾರ್ವತ್ರಿಕ ಚುನಾವಣೆ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮದ್ಯ ಮಾರಾಟ ನೀಷೇಧ

ಕರ್ನಾಟಕ ಸಾರ್ವತ್ರಿಕ ಚುನಾವಣೆ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮದ್ಯ ಮಾರಾಟ ನೀಷೇಧ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡ ರಂಗೇರಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳಿಗೆ ರಾಜ್ಯ ಚುನಾವಣಾ ಆಯೋದ ಮಹತ್ವದ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನು ಕೇವಲ 48 ಗಂಟೆಗಳು ಮಾತ್ರ ಬಾಕಿ ಉಳಿದಿದ್ದು, ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಪಕ್ಷಗಳ ಘಟಾನುಘಟಿ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇಂದು (ಮೇ.08) ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಈ ಹಿನ್ನೆಲೆ ರಾಜಕೀಯ ಪಕ್ಷಗಳಿಗೆ ರಾಜ್ಯ ಚುನಾವಣಾ ಆಯೋದ ಮಹತ್ವದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

1) ಮತದಾನಕ್ಕೆ 48 ಗಂಟೆಗಳು ಬಾಕಿ ಇರುವಾಗ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಈ ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಂಜೆ 5ರ ಬಳಿಕ ಸಭೆ, ಸಮಾರಂಭ, ಉತ್ಸವ, ಱಲಿ ಮತ್ತು ಧ್ವನಿ ವರ್ಧಕಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ಕ್ಷೇತ್ರದಲ್ಲಿ ಅಭ್ಯರ್ಥಿ ಹೊರತುಪಡಿಸಿ ಬೇರೆ ನಾಯಕರು ಬರುವಂತಿಲ್ಲ. ಆದರೆ ಮನೆ ಮನೆಗೆ ತೆರಳಿ ಅಭ್ಯರ್ಥಿ ಸೇರಿ 6 ಜನರು ಮಾತ್ರ ಪ್ರಚಾರ ಮಾಡಲು ಅವಕಾಶವಿದೆ. 1. 48 ಗಂಟೆಗಳ ಕಾಲ ಅಕ್ರಮ ಸಭೆ ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ.

2. ಪ್ರಚಾರದ ಅವಧಿ ಮುಗಿದ ನಂತರ ಕ್ಷೇತ್ರದಲ್ಲಿ ರಾಜಕೀಯ ಕಾರ್ಯಕರ್ತರ ಉಪಸ್ಥಿತಿಗೆ ನಿರ್ಬಂಧ ಹೇರಲಾಗಿದೆ. 3. ಮೇ 8ರ ಸಂಜೆ 6ರಿಂದ ಮೇ 10ರವರೆಗೆ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ 4. 48 ಗಂಟೆಗಳ ಕಾಲ ಯಾವುದೇ ಧ್ವನಿವರ್ಧಕಗಳ ಬಳಕೆಯನ್ನು ಅನುಮತಿಸಲಾಗುವುದಿಲ್ಲ 5. ಯಾವುದೇ ಪಕ್ಷ ಅಥವಾ ಅಭ್ಯರ್ಥಿಯು ಅಸ್ತಿತ್ವದಲ್ಲಿರುವ ಭಿನ್ನಾಭಿಪ್ರಾಯಗಳನ್ನು ಉಲ್ಬಣಗೊಳಿಸಬಹುದಾದ ಅಥವಾ ಪರಸ್ಪರ ದ್ವೇಷವನ್ನು ಉಂಟುಮಾಡುವ ಯಾವುದೇ ಚಟುವಟಿಕೆಯನ್ನು ನಡೆಸುವಂತಿಲ್ಲ.. 6. ಸೂಕ್ಷ್ಮ ಅಥವಾ ನಿರ್ಣಾಯಕ ಮತ ಕೇಂದ್ರಗಳನ್ನು ವೆಬ್-ಕಾಸ್ಟಿಂಗ್, ಸಿಸಿಟಿವಿಗಳ ಮೂಲಕ ನಿರಂತರ ವೀಕ್ಷಣೆಯಲ್ಲಿರಿಸಬೇಕು.
أحدث أقدم