SSLC ಫಲಿತಾಂಶ ಪ್ರಕಟ: ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ
ಕರ್ನಾಟಕ ಜಿಲ್ಲಾವಾರು 10ನೇ ತರಗತಿ ಫಲಿತಾಂಶ 2023: 2022-23ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ ಹಾಗೂ ಯಾದಗಿರಿ ಅಂತಿಮ ಸ್ಥಾನ ಗಳಿಸಿದೆ.ಈ ಬಾರಿ ಶೇ. 83.89 ರಷು ಫಲಿತಾಂಶ ಬಂದಿದೆ. ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ. 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.