ಒಡಿಶಾ ರೈಲು ಅಪಘಾತ: ಸಾವಿನ ಸಂಖ್ಯೆ 288 ಕ್ಕೆ ಏರಿಕೆ

ಒಡಿಶಾ ರೈಲು ಅಪಘಾತ: ಸಾವಿನ ಸಂಖ್ಯೆ 288 ಕ್ಕೆ ಏರಿಕೆ


ಬಾಲಸೋರ್‌:ಡಿಶಾ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 288ಕ್ಕೆ ಏರಿಕೆಯಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ಸಾವುನೋವುಗಳ ವರದಿಯಾಗಿದೆ.


ಒಡಿಶಾ ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕ ಸುಧಾಂಶು ಸಾರಂಗಿ, ರಕ್ಷಣಾ ತಂಡಗಳು 200 ಕ್ಕೂ ಹೆಚ್ಚು ಮೃತದೇಹಗಳನ್ನು ಪತ್ತೆಹಚ್ಚಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಿದ್ದಾರೆ.

ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಅಪಘಾತ ಸಂಭವಿಸಿದ್ದು, ಬಾಲಸೋರ್ ಜಿಲ್ಲೆಯಲ್ಲಿ ಹಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ.


ಬೆಂಗಳೂರು ಬೈಯಪ್ಪನಹಳ್ಳಿ ನಿಲ್ದಾಣದಿಂದ 1,294 ಪ್ರಯಾಣಿಕರು ಅಪಘಾತಕೀಡಾದ ಯಶವಂತಪುರ -ಹೌರಾ ರೈಲಿನಲ್ಲಿ ತೆರಳುತ್ತಿದ್ದರು. ಯಶವಂತಪುರದಿಂದ ಪಶ್ಚಿಮ ಬಂಗಾಳದ ಹೌರಾಗೆ ರೈಲು ತೆರಳುವಾಗ 1,294 ಪ್ರಯಾಣಿಕರ ಬಗ್ಗೆ 994 ಮಂದಿ ಬುಕ್ ಮಾಡಿದ್ದರು.

ಬಹುನಾಗ ನಿಲ್ದಾಣದ ಬಳಿ ಮೂರು ರೈಲುಗಳು ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಸ್ಥಳಕ್ಕೆ ಇಂದು ಸಿಎಂ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ.

ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 207ಕ್ಕೆ ಏರಿಕೆಯಾಗಿದ್ದು, 900ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.


ಹೇಗಾಯ್ತು?: ಶುಕ್ರವಾರ ರಾತ್ರಿ 7 ಗಂಟೆ ಹೊತ್ತಿನಲ್ಲಿ ಈ ದುರಂತ ಸಂಭವಿಸಿದೆ. ಕೋಲ್ಕತ್ತಾದ ಶಾಲಿಮಾರ್​ ರೈಲು ನಿಲ್ದಾಣದಿಂದ ಚೆನ್ನೈಗೆ ತೆರಳುತ್ತಿದ್ದ ಕೋರಮಂಡಲ್​ ಎಕ್ಸ್​ಪ್ರೆಸ್​ ಒಡಿಶಾದ ಬಹನಗಾ ರೈಲು ನಿಲ್ದಾಣದಲ್ಲಿ ಸಾಗುತ್ತಿದ್ದಾಗ ಹಳಿ ತಪ್ಪಿದೆ. ಇದರಿಂದ ಪಕ್ಕದ ಹಳಿಯಲ್ಲಿ ನಿಂತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ರೈಲಿನ 12 ಬೋಗಿಗಳು ಜಾರಿ ಮೂರನೇ ಹಳಿಯ ಮೇಲೆ ಬಿದ್ದಿವೆ. ಇದೇ ವೇಳೆ ಅದೇ ಮಾರ್ಗವಾಗಿ ಎದುರಿನಿಂದ ಬಂದ ಬೆಂಗಳೂರಿನಿಂದ ಹೊರಟಿದ್ದ ಹೌರಾ ಎಕ್ಸ್​ಪ್ರೆಸ್​ ಹಳಿತಪ್ಪಿ ಬಿದ್ದಿದ್ದ ಬೋಗಿಗಳಿಗೆ ರಭಸವಾಗಿ ಗುದ್ದಿದೆ. ಈ ವೇಳೆ ಈ ರೈಲಿನ 4 ಬೋಗಿಗಳೂ ಹಳಿತಪ್ಪಿವೆ.

ಹಳಿ ತಪ್ಪಿದ ಬೋಗಿಗಳಿಗೆ ರೈಲು ಡಿಕ್ಕಿಯಾದ ಕಾರಣ ಭೀಕರತೆ ಹೆಚ್ಚಾಗಿದೆ. ಕೆಲ ದೇಹಳು ತುಂಡಾಗಿ ಬಿದ್ದಿವೆ. ಇನ್ನೂ ಕೆಲವರು ನುಜ್ಜುಗುಜ್ಜಾದ ಬೋಗಿಯ ಒಳಗೆ ದುರ್ಮರಣಕ್ಕೀಡಾಗಿದ್ದಾರೆ. ಇಲ್ಲಿಯವರೆಗೂ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ 233 ಶವಗಳನ್ನು ಹೊರತೆಗೆಯಲಾಗಿದೆ. 1 ಸಾವಿರಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಗಂಭೀರ ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಎಲ್ಲರನ್ನೂ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Previous Post Next Post