ಕೇರಳಕ್ಕೆ ಅಪ್ಪಳಿಸಿದ ಮುಂಗಾರು: 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮಾನ್ಸೂನ್ ಪ್ರವೇಶ

ಕೇರಳಕ್ಕೆ ಅಪ್ಪಳಿಸಿದ ಮುಂಗಾರು: 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮಾನ್ಸೂನ್ ಪ್ರವೇಶ


ಭಾರತೀಯ ಹವಾಮಾನ ಇಲಾಖೆ ದೇಶದ ವಾಸಿಗಳಿಗೆ ಸಿಹಿ ಸುದ್ದಿ ನೀಡಿದೆ. ಮುಂಗಾರು ಭಾರತಕ್ಕೆ ಪ್ರವೇಶಿಸಿದ್ದು, ಇನ್ನು 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ ಎಂದು ಹೇಳಿದೆ.


ನೈರುತ್ಯ ಮುಂಗಾರು ಕೊನೆಗೂ ದೇಶವನ್ನು ಪ್ರವೇಶಿಸಿದೆ. ಗುರುವಾರ ಕೇರಳ ಕರಾವಳಿಗೆ ಅಪ್ಪಳಿಸಿರುವುದಾಗಿ ಐಎಂಡಿ ಅಧಿಕೃತವಾಗಿ ಪ್ರಕಟಿಸಿದೆ. ಹವಾಮಾನ ಇಲಾಖೆ ನಿರೀಕ್ಷಿಸಿದ್ದಕ್ಕಿಂತ ಏಳು ದಿನಗಳ ನಂತರ ಮುಂಗಾರು ದೇಶವನ್ನು ಪ್ರವೇಶಿಸಿದೆ.

ಪ್ರಸ್ತುತ, ನೈರುತ್ಯ ಮುಂಗಾರು ಲಕ್ಷದ್ವೀಪ ಮತ್ತು ಕೇರಳದಲ್ಲಿ ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ಬಹಿರಂಗಪಡಿಸಿದೆ. ಮುಂಗಾರು ಆರಂಭವಾದ ಕಾರಣ ಕೇರಳದಲ್ಲಿ ಕಳೆದ 24 ಗಂಟೆಗಳಿಂದ ಭಾರೀ ಮಳೆಯಾಗುತ್ತಿದೆ. ಮುಂದಿನ 48 ಗಂಟೆಗಳಲ್ಲಿ, ಕೇರಳದ ಇತರ ಭಾಗಗಳು, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಚಲಿಸಲು ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿವೆ ಆದರೆ, ಮೊದಲ ವಾರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸಾಮಾನ್ಯವಾಗಿ, ನೈಋತ್ಯ ಮಾನ್ಸೂನ್ ಜೂನ್ 1 ರಂದು ಕೇರಳ ಕರಾವಳಿಯನ್ನು ಅಪ್ಪಳಿಸಬೇಕಿತ್ತು. ಹವಾಮಾನ ಬದಲಾವಣೆ ಮತ್ತು ಚಂಡಮಾರುತದ ಚಲನೆಯಿಂದಾಗಿ, ಇದು ಒಂದು ವಾರ ತಡವಾಗಿ ದೇಶವನ್ನು ಪ್ರವೇಶಿಸಿತು. ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ರಂದು ಮತ್ತು 2020 ರಲ್ಲಿ ಜೂನ್ 1 ರಂದು ಕರಾವಳಿಯನ್ನು ಅಪ್ಪಳಿಸಿತು. 

Previous Post Next Post