ಮಹತ್ವದ ಸಚಿವ ಸಂಪುಟ ಸಭೆ: ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ಸರಕಾರ ಬ್ರೇಕ್

ಮಹತ್ವದ ಸಚಿವ ಸಂಪುಟ ಸಭೆ: ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ಸರಕಾರ ಬ್ರೇಕ್


ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಈ ಹಿಂದಿನ ಸರ್ಕಾರದ ಹಲವು ಯೋಜನೆ, ಹಲವು ಕಾಯ್ದೆಗಳಿಗೆ ಕತ್ತರಿ ಹಾಕುತ್ತಿದೆ. ಇದರ ಮುಂದುವರಿದ ಭಾಗವಾಗಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಘೋಷಿಸಿದೆ.


ಬಿಜೆಪಿ ಸೇರಿಸಿದ್ದ ಪಠ್ಯಗಳನ್ನು ತೆಗೆದು ಹಾಕಲು ನಿರ್ಧರಿಸಿರುವ ಸಿದ್ದರಾಮಯ್ಯ ಸರ್ಕಾರ, ಇದೀಗ ಬಿಜೆಪಿ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಗೆ ಕೊಕ್ ನೀಡಲು ಸಂಪುಟ ಸಭೆಯ ಅನುಮೋದನೆ ಪಡೆಯಲಾಗಿದೆ. ಬಿಜೆಪಿಯ ಮಹತ್ವಾಕಾಂಕ್ಷಿಯ ಮತಾಂತರ ನಿಷೇಧ ಕಾಯ್ದೆಗೆ ಇದೀಗ ಕಾಂಗ್ರೆಸ್ ಸರ್ಕಾರ ಬ್ರೇಕ್ ಹಾಕಿದೆ.

ಈ ಬಾರಿಯ ಚನಾವಣೆಯಲ್ಲಿ ಕಾಂಗ್ರೆಸ್, ಮತಾಂತರ ನಿಷೇಧ ಕಾಯ್ದೆ ವಾಪಸ್, ಗೋ ಹತ್ಯಾ ನಿಷೇಧ ಕಾಯ್ದೆ ವಾಪಸ್, ಹಿಜಾಬ್ ನಿಷೇಧ ಆದೇಶಗಳನ್ನು ವಾಪಸ್ ಪಡೆಯುವುದಾಗಿ ಹೇಳಿತ್ತು.ಇಂದು ನಡದ ಸಂಪುಟ ಸಭೆಯಲ್ಲಿ ಹಲವು ನಿರ್ಧಾರಗಳನ್ನ ತೆಗೆದುಕೊಳ್ಳಲಾಗಿದೆ. ಇದರಲ್ಲಿ ಮತಾಂತರ ನಿಷೇಧ ಕಾಯ್ದೆ ಪ್ರಮುಖವಾಗಿದೆ. ಬಿಜೆಪಿ ಆಡಳಿತದಲ್ಲಿ ಜಾರಿಗೆ ತಂದಿರುವ ಜನವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುತ್ತೇವೆ ಎಂದು ಸಚಿವ ಹೆಚ್‌ಕೆ ಪಾಟೀಲ್ ಹೇಳಿದ್ದಾರೆ.

ಕೆಲವು ಬದಲಾವಣೆ ಮೂಲಕ ಮತಾಂತರ ನಿಷೇಧ ಕಾಯ್ದೆ ವಿಧೇಯಕ ತರಲು ಸಂಪುಟ ಸಭೆ ತಿರ್ಮಾನ ಮಾಡಿದೆ ಎಂದು ಹೆಚ್‌ಕೆ ಪಾಟೀಲ್ ಹೇಳಿದ್ದಾರೆ.


ಶಾಲಾ ಪಠ್ಯಕ್ರಮದಿಂದ ಸಾವರ್ಕರ್, ಹೆಗ್ಡೇವಾರ್ ಪಠ್ಯಗಳಿಗೆ ಕೋಕ್, ನೆಹರು ಅಂಬೇಡ್ಕರ್ ಪಠ್ಯ ಸೇರ್ಪಡೆ

ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಸೇರಿಸಿದ್ದಂತ ಆರ್ ಎಸ್ ಎಸ್ ಮುಖಂಡ ಹೆಗ್ಡೆವಾರ್ ಹಾಗೂ ಹಿಂದೂ ಮಹಾಸಭಾ ಮುಖಂಡ ವಿ.ಡಿ ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರ ಪಠ್ಯವನ್ನು ಕೈಬಿಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ.


ಕನ್ನಡದಲ್ಲಿ 6ರಿಂದ 10 ತರಗತಿವರೆಗೆ ಕೆಲವು ಬದಲಾವಣೆ ಮಾಡಲಾಗುತ್ತೆ. ಇನ್ನು ಸಮಾಜ ವಿಜ್ಞಾನದಲ್ಲಿ 6 ರಿಂದ 10ನೇ ತರಗತಿವರೆಗೆ ಕೆಲವು ಬದಲಾವಣೆ ತರಲಾಗುತ್ತೆ ಎಂದು ಶಿಕ್ಷಣ ಸಚಿವರು ಹೇಳಿದರು.

ಅದ್ರಂತೆ, 'ಪಠ್ಯ ಪುಸ್ತಕದಲ್ಲಿ ಸಾವಿತ್ರಿ ಫುಲೆ ವಿಚಾರ, ನೀ ಹೋದ ಮರು ದಿನ ವಿಚಾರ ಮರುಸೇರ್ಪಡೆ ಮಾಡಲಿದ್ದು, ನೆಹರು ಪುತ್ರಿ ಇಂದಿರಾ ಬರೆದಿದ್ದ 'ನೀ ಬರೆದ ಪತ್ರ' ಮರು ಸೇರ್ಪಡೆ ಮಾಡಲಾಗುವುದು' ಎಂದು ಹೇಳಿದರು.

ಮಾತು ಮುಂದುವರೆಸಿದ ಸಚಿವರು, 'ಆರ್‍ಎಸ್‍ಎಸ್‍ಸಂಸ್ಥಾಪಕ ಕೇಶವ ಹೆಡ್ಗೇವಾರ್ ಭಾಷಣ ತೆಗೆದಿದ್ದೇವೆ. ಸಾರ್ವಕರ್ , ಚಕ್ರವರ್ತಿ ಸೂಲಿಬೆಲೆ ಬರೆದ ಅಂಶಗಳನ್ನ ತೆಗೆದಿದ್ದೇವೆ. ಯಾಕಂದ್ರೆ, ಮಕ್ಕಳು ಸರಿಯಾದ ವಿಚಾರ ಕಲಿಯಬೇಕೆಂದು ಕೆಲ ಬದಲಾವಣೆ ಮಾಡಲಾಗಿದೆ ಎಂದರು.

أحدث أقدم