ಶಕ್ತಿ ಯೋಜನೆ: ಮಹಿಳೆಯರಿಗೆ ಉಚಿತ ಪ್ರಯಾಣ; ಜೂನ್ ಹನ್ನೊಂದರಿಂದ ಜಾರಿ, ಅರ್ಜಿ ಸಲ್ಲಿಕೆ ವಿಧಾನ ಹೇಗೆ?

ಶಕ್ತಿ ಯೋಜನೆ: ಮಹಿಳೆಯರಿಗೆ ಉಚಿತ ಪ್ರಯಾಣ; ಜೂನ್ ಹನ್ನೊಂದರಿಂದ ಜಾರಿ, ಅರ್ಜಿ ಸಲ್ಲಿಕೆ ವಿಧಾನ ಹೇಗೆ? 


ಬೆಂಗಳೂರು: ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸೌಲಭ್ಯ ಒದಗಿಸಲಾಗಿತ್ತು. ಈ ಯೋಜನೆ ಜಾರಿಗೊಳಿಸಿ ಸರ್ಕಾರ ಮಾರ್ಗಸೂಚಿ ಕೂಡ ಪ್ರಕಟಿಸಿತ್ತು. ಈ ಬೆನ್ನಲ್ಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿಸ್ತೃತವಾದಂತ ಮಾರ್ಗಸೂಚಿಯನ್ನು ಪ್ರಕಟಿಸಿದೆ.


ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಸಾಮಾನ್ಯ ಸ್ಥಾಯಿ ಆದೇಶವನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ನೀಡುವ ಸಂಬಂಧ ಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದಿದ್ದಾರೆ.

ದಿನಾಂಕ 11-06-2023ರಿಂದ ಜಾರಿಗೊಳಿಸಲು ಸರ್ಕಾರದ ದಿನಾಂಕ 05-06-2023ರಂದು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.


ಶಕ್ತಿ ಯೋಜನೆ ಮುಖ್ಯಾಂಶಗಳು

 • ಕರ್ನಾಟಕ ರಾಜ್ಯದ ಮಹಿಳೆಯರಿಗೆ ( ವಿದ್ಯಾರ್ಥಿನಿಯರು ಸೇರಿದಂತೆ ) ಮಾತ್ರ ಉಚಿತ ಪ್ರಯಾಣ ಸೌಲಭ್ಯ ಅನ್ವಯಿಸುತ್ತದೆ.
 • ಮಹಿಳಾ ಪ್ರಯಾಣಿಕರ ಪೈಕಿ 6 ವರ್ಷದಿಂದ 12 ವರ್ಷದವರೆಗಿನ ಬಾಲಕಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ಸಹ ಒಳಗೊಂಡಿರುತ್ತಾರೆ.
 • ಕೆ ಎಸ್ ಆರ್ ಟಿ ಸಿಯ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ (ತಡೆರಹಿತ ಸಾರಿಗೆಗಳು ಒಳಗೊಂಡಂತೆ ) ಸಾರಿಗೆಗಳಲ್ಲಿ ಮಾತ್ರ ಮಹಿಳೆಯರು ರಾಜ್ಯಾಧ್ಯಂತ ಉಚಿತವಾಗಿ ಪ್ರಯಾಣಿಸಲು ಅವಕಾಶ ನಿಡಲಾಗಿದೆ.
 • ಐಷಾರಾಮಿ ಬಸ್ಸುಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್, ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪ್ಲಸ್ ಸಾರಿಗಗೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವು ಅನ್ವಯಿಸುವುದಿಲ್ಲ.
 • ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ದೂರುದ ಯಾವುದೇ ಮಿತಿ ಇರುವುದಿಲ್ಲ. ಈ ಪ್ರಯಾಣ ಸೌಲಭ್ಯವು ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಅನ್ವಯವಾಗುತ್ತದೆ.
 • ಶಕ್ತಿ ಯೋಜನೆಯ ದೈನಿಕ ಪಾಸು, ಮಾಸಿಕ ಪಾಸು, ಸಾಂದರ್ಭಿಕ ಒಪ್ಪಂದ ಹಾಗೂ ಖಾಯಂ ಗುತ್ತಿಗೆ ಪ್ಯಾಕೇಜ್ ಮುಂತಾದ ಸೇವೆಗಳಿಗೆ ಅನ್ವಯಿಸುವುದಿಲ್ಲ.

ಈ ದಾಖಲೆಗಳನ್ನು ಉಚಿತವಾಗಿ ಸಾರಿಗೆ ಬಸ್ ನಲ್ಲಿ ಪ್ರಯಾಣಿಸಲು ಮಹಿಳೆಯರು ತೋರಿಸುವುದು ಕಡ್ಡಾಯ

 • ಆಧಾರ್ ಕಾರ್ಡ್
 • ಚುನಾವಮಾ ಆಯೋಗ ವಿಚತರಿಸುವ ಮತದಾರರ ಗುರುತಿನ ಚೀಟಿ
 • ಚಾಲನಾ ಪರವಾನಗಿ ಪತ್ರ
 • ವಾಸಸ್ಥಳ ನಮೂದಿಸಿರುವ ಭಾರತ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು ವಿತರಿಸುವ ಗುರುತಿನ ಚೀಟಿ
 • ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಗುರುತಿನ ಚೀಟಿ.

ಅರ್ಜಿ ಸಲ್ಲಿಸುವುದು ಹೇಗೆ

ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುವವರೆಗೆ ಮೇಲೆ ತಿಳಿಸಿರುವ ಗುರುತಿನ ಚೀಟಿಗಳನ್ನು ಪರಿಗಣಿಸಿ, ಶೂನ್ಯ ಮೊತ್ತದ ಮಹಿಳೆಯರ ಉಚಿತ ಟಿಕೆಟ್ ಗಳನ್ನು ವಿತರಿಸಲು ಸೂಚಿಸಿದೆ.

ನಿರ್ವಾಹಕರ ಜವಾಬ್ದಾರಿಗಳು

 • ಕೆಲ ಆಯ್ದ ಅಂತರರಾಜ್ಯ ಸಾರಿಗೆಗಗಳನ್ನು ಹೊರತುಪಡಿಸಿ, ಉಳಿದ ಅಂತರರಾಜ್ಯ ಸಾರಿಗೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶವಿರುವುದಿಲ್ಲ. ಈ ಬಗ್ಗೆ ಮಹಿಳೆಯರಿಗೆ ಮಾಹಿತಿ ನೀಡುವಂತೆ, ಸೌಜನ್ಯದಿಂದ ವರ್ತಿಸುವುದು.
 • ಈ ಯೋಜನೆಯಡಿ ವಿತರಿಸುವ ಉಚಿತ ಪ್ರಯಾಣದ ಟಿಕೇಟ್ ಉಚಿತವೆಂದು ಭಾವಿಸಬಾರದು. ಈ ಟಿಕೆಟ್ ಗಳ ವಿತರಣೆಯಿಂದ ಬರುವ ಮೊತ್ತವನ್ನು ಕರ್ನಾಟಕ ಸರ್ಕಾರವು ಮರುಪಾವತಿಸುತ್ತದೆ ಎಂದು ತಿಳಿಸಿದೆ.
 • ವಾಹನದಲ್ಲಿ ಇರುವ ಎಲ್ಲಾ ಪ್ರಯಾಣಿಕರಿಗೆ ಟಿಕೆಟ್ ವಿತರಿಸುವ ಮಾದರಿಯಂತೆ ಎಲ್ಲಾ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಶೂನ್ಯ ಮೊತ್ತದ ಟಿಕೆಟ್ ವಿತರಿಸುವುದು ಕಡ್ಡಾಯವಾಗಿರುತ್ತದೆ.
 • ಮಹಿಳಾ ಪ್ರಯಾಣಿಕರು ಯಾವುದಾದರೂ ದಾಖಲೆ ಹಾಜರುಪಡಿಸಿದರೂ ಅನುಮತಿಸುವುದು. ಡಿಜಿಲಾಕರ್ ಮುಖಾಂತರ ಗುರುತಿನ ಚೀಟಿ ಹಾಜರುಪಡಿಸಿದರು ಮಾನ್ಯ ಮಾಡುವುದು.

Previous Post Next Post