ಭಾರೀ ಮಳೆ ಹಿನ್ನೆಲೆ: ನಾಳೆ (ಜುಲೈ 25) ದಕ್ಷಿಣ ಕನ್ನಡ ಉಡುಪಿ ಕೊಡಗು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕಾಲೇಜುಗಳಿಗೆ ಜು.25ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಅತ್ಯಧಿಕ ಮಳೆಯ ಸಾಧ್ಯತೆಯ ರೆಡ್ ಅಲರ್ಟ್‌ನ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಜಿಲ್ಲಾಧಿಕಾರಿಗಳು ಡಾ. ವಿದ್ಯಾಕುಮಾರಿ ಘೋಷಿಸಿದ್ದಾರೆ.
ಕೊಡಗು, ಜು.24: ಜಿಲ್ಲಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜು.25ರಂದು ಕೂಡಾ ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.