ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೆಜುಗಳಿಗೆ ನಾಳೆ ರಜೆ ಘೋಷಿಸಿದ ಜಿಲ್ಲಾಧಿಕಾರಿಗಳು

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೆಜುಗಳಿಗೆ ನಾಳೆ ರಜೆ ಘೋಷಿಸಿದ ಜಿಲ್ಲಾಧಿಕಾರಿಗಳು


ಮಂಗಳೂರು, ಜು.5: ದ.ಕ.ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ವ್ಯಾಪಕ ಮಳೆಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಲಾಗಿದೆ.


ನೀರು ನಿಲ್ಲುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಕೈಗೊಳ್ಳಬೇಕು.

ದ.ಕ ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನಿರ್ದೇಶಿಸಿದ್ದಾರೆ.


ಉಡುಪಿ, ಜು.5: ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

Previous Post Next Post