ಚಂದ್ರಯಾನ 3 ಚಂದ್ರನಲ್ಲಿ ಲ್ಯಾಂಡಿಂಗ್ ಪ್ರಕ್ರಿಯೆ: ನಾಳೆ ಸಂಜೆ 6ಕ್ಕೆ ವಿಕ್ರಮ್ ಲ್ಯಾಂಡರ್ ಚಂದ್ರ ನಲ್ಲಿ ಇಳಿಸಲು ಇಸ್ರೋ ಪ್ರಯತ್ನ

ಚಂದ್ರಯಾನ 3 ಚಂದ್ರನಲ್ಲಿ ಲ್ಯಾಂಡಿಂಗ್ ಪ್ರಕ್ರಿಯೆ: ನಾಳೆ ಸಂಜೆ 6ಕ್ಕೆ ವಿಕ್ರಮ್ ಲ್ಯಾಂಡರ್ ಚಂದ್ರ ನಲ್ಲಿ ಇಳಿಸಲು ಇಸ್ರೋ ಪ್ರಯತ್ನ


ನವದೆಹಲಿ: ಭಾರತದ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ 3 ಬಹುನಿರೀಕ್ಷಿತ ಹಂತಕ್ಕೆ ತಲುಪಿದೆ. ನಾಳೆ ಸಂಜೆ 6 ಗಂಟೆಗೆ ವಿಕ್ರಮ್​ ಲ್ಯಾಂಡರ್ ಅನ್ನು​ ಚಂದ್ರನ ಅಂಗಳಕ್ಕೆ ಇಳಿಸುವ ಪ್ರಯತ್ನವನ್ನು ಇಸ್ರೋ ಮಾಡಲಿದೆ. ಕಳೆದ ಚಂದ್ರಯಾನ 2ರಲ್ಲಿ ಇದೇ ಹಂತದಲ್ಲಿ ಇಸ್ರೋ ವಿಫಲಗೊಂಡಿತ್ತು. ಇಸ್ರೋಗೆ ಸಾಫ್ಟ್​ ಲ್ಯಾಂಡಿಂಗ್​ ಒಂದು ಸವಾಲಾಗಿದ್ದು, ಕೊನೆಯ 20 ನಿಮಿಷ ಬಹಳ ನಿರ್ಣಾಯಕವಾಗಿದೆ.

ಸದ್ಯ ಭಾರತ ಚಂದ್ರನ ಮೇಲೆ ಸಾಫ್ಟ್​ ಲ್ಯಾಂಡ್​ ಮಾಡುವ ಮೂಲಕ ಇತಿಹಾಸ ಬರೆಯಲು ಸಜ್ಜಾಗಿದೆ. ವಿಕ್ರಮ್​ ಲ್ಯಾಂಡರ್​ನ ಒಳಗಿರುವ ಪ್ರಗ್ಯಾನ್​ ರೋವರ್​ ಚಂದ್ರನ ಅಂಗಳಕ್ಕೆ ಇಳಿದು ತನ್ನ ಚಮತ್ಕಾರ ಪ್ರದರ್ಶಿಸಲು ಸಜ್ಜಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಇಡೀ ಭಾರತವೇ ಎದುರು ನೋಡುತ್ತಿದೆ. ಒಂದು ವೇಳೆ ಚಂದ್ರನ ದಕ್ಷಿಣ ಧ್ರವದಲ್ಲಿ ಚಂದ್ರಯಾನ ನೌಕೆ ಲ್ಯಾಂಡ್​ ಆದರೆ, ಭಾರತದ ಪಾಲಿಗೆ ಸುವರ್ಣ ಯುಗವಾಗಲಿದೆ. ಏಕೆಂದರೆ ಈವರೆಗೂ ಯಾವುದೇ ದೇಶ ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್​ ಆಗಿಲ್ಲ. ಇಲ್ಲಿ ಲ್ಯಾಂಡ್​ ಆಗುವುದು ತುಂಬಾ ಕಷ್ಟವೆಂದು ಹೇಳಲಾಗಿದೆ. ಇನ್ನು ಅಮೆರಿಕ, ರಷ್ಯಾ, ಫ್ರಾನ್ಸ್​ ಮತ್ತು ಚೀನಾ ಈಗಾಗಲೇ ಚಂದ್ರನ ಅಂಗಳಕ್ಕೆ ಇಳಿದಿವೆ. ಆದರೆ, ದಕ್ಷಿಣ ಧ್ರುವದಲ್ಲಲ್ಲ. ಆದರೆ, ಭಾರತದ ಯಶಸ್ವಿಯಾದರೆ, ಈ ರಾಷ್ಟ್ರಗಳ ಸಾಲಿಗೆ ಸೇರುವುದಲ್ಲದೆ, ದಕ್ಷಿಣ ಧ್ರುವದಲ್ಲಿ ಲ್ಯಾಂಡ್​ ಮಾಡಿದ ಏಕೈಕ ರಾಷ್ಟ್ರ ಎಂಬ ಹೆಗ್ಗಳಿಕೆಯನ್ನು ಸಾಧಿಸಲಿದೆ.

ಆದರೆ, ದಕ್ಷಿಣ ಧ್ರುವ ಪ್ರದೇಶದಲ್ಲಿ ಇಳಿಯುವ ಪ್ರಕ್ರಿಯೆಯಲ್ಲಿ ಕೊನೆಯ 20 ನಿಮಿಷ ತುಂಬಾ ನಿರ್ಣಾಯಕವಾಗಿದೆ.



أحدث أقدم