ನಾಳೆ ಬೆಂಗಳೂರಿನಲ್ಲಿ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನ, ರಾಜ್ಯ ರಾಜಧಾನಿಗೆ ಗ್ರಾಂಡ್ ಮುಫ್ತಿ

ನಾಳೆ ಬೆಂಗಳೂರಿನಲ್ಲಿ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನ, ರಾಜ್ಯ ರಾಜಧಾನಿಗೆ ಗ್ರಾಂಡ್ ಮುಫ್ತಿ

ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಮಲಮಾ ಎಫಿ ಉಸ್ತಾದ್ ಕರ್ನಾಟಕ ಸರಕಾರದ ವಿಶೇಷ ಅತಿಥಿ

ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್) ಇದರ ಐವತ್ತನೇ ವರ್ಷಾಚರಣೆ ಪ್ರಯುಕ್ತ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನ ಹಾಗೂ ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿಯ ವತಿಯಿಂದ We The people of India ಎಂಬ ಸಂವಿಧಾನದ ಪೀಠಿಕೆಯ ಮೊದಲ ವಾಕ್ಯವನ್ನು ಎತ್ತಿ ಹಿಡಿದು ಕಾಶ್ಮೀರದಿಂದ ಆರಂಭಗೊಂಡು ದೇಶದ ಎಲ್ಲಾ ರಾಜ್ಯಗಳಲ್ಲಿ ಹಾದು ಬಂದ ಸಂವಿಧಾನ ಯಾತ್ರೆಯ ಸಮಾರೋಪ ಸಮಾರಂಭ ನಾಳೆ  (ಸೆಪ್ಟೆಂಬರ್ 10) ಬೆಂಗಳೂರು ಮಹಾನಗರದ ಶ್ರೀ ಕೃಷ್ಣ ವಿಹಾರ್‌ ಅರಮನೆ ಮೈದಾನದಲ್ಲಿ  ನಡೆಯಲಿದೆ.
    

ಬೆಂಗಳೂರಿನಲ್ಲಿ ನಡೆಯಲಿರುವ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನ ವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರು ಉದ್ಘಾಟನೆ ಮಾಡಲಿದ್ದು ಕರ್ನಾಟಕ ಉಲಮಾ ಒಕ್ಕೂಟದ ಅಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಮುಖ್ಯ ಭಾಷಣ ಮಾಡಲಿದ್ದಾರೆ.
ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್,ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಸಯ್ಯಿದ್ ಖುರ್ರತುಸ್ಸಾದಾತ್ ಫಝಲ್ ಅಲ್ ಬುಖಾರಿ ಕೂರತ್, ಸನ್ಮಾನ್ಯ ವಿಧಾನಸಭಾ ಸಭಾಧ್ಯಕ್ಷರಾದ ಯುಟಿ ಖಾದರ್ ಫರೀದ್, ಗೃಹ ಮಂತ್ರಿಗಳಾದ ಜಿ ಪರಮೇಶ್ವರ್, ವಕ್ಫ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರು ಬಿ ಝಡ್ ಝಮೀರ್ ಅಹ್ಮದ್ ಖಾನ್, ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ, ತಮಿಳುನಾಡು ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರು ಗಿಂಗಿ ಮಸ್ತಾನ್,  ಸಂಸದ ಟಿ.ಎನ್ ಪ್ರತಾಪನ್ ತೃಶೂರ್ ಕೇರಳ ಹಾಗೂ ಇನ್ನಿತರ ಧಾರ್ಮಿಕ ರಾಜಕೀಯ ಸಾಮಾಜಿಕ ವಲಯದ ಪ್ರಮುಖರು ಭಾಗವಹಿಸಲಿದ್ದಾರೆ.
  ನಾಳೆ ಬೆಳಿಗ್ಗೆ ಏಳು ಗಂಟೆಯಿಂದ ಶೃಂಗಾರ್ ಪ್ಯಾಲೇಸ್ ಸಭಾಂಗಣದಲ್ಲಿ ಪ್ರತಿನಿಧಿ ಸಮಾವೇಶ ನಡೆಯಲಿದ್ದು ರಾಜ್ಯದ ವಿವಿಧೆಡೆಗಳಿಂದ ಸುಮಾರು ಏಳು ಸಾವಿರ ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಸಮಿತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Previous Post Next Post