ಲೋಕಸಭಾ 2ನೇ ಹಂತ: ಕರ್ನಾಟಕದ 14 ಸೇರಿದಂತೆ 88 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯ

ಲೋಕಸಭಾ 2ನೇ ಹಂತ: ಕರ್ನಾಟಕದ 14 ಸೇರಿದಂತೆ 88 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯ 


ನವದೆಹಲಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 13 ರಾಜ್ಯಗಳ 88 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಯಿತು.

ಕರ್ನಾಟಕ, ಕೇರಳ, ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ಬಿಹಾರ, ಅಸ್ಸಾಂ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಮಣಿಪುರ, ತ್ರಿಪುರಾ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮತದಾನ ನಡೆಯಿತು.


ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ (Lok Sabha Election) ಶುಕ್ರವಾರ ಸಂಜೆ (ಏಪ್ರಿಲ್​ 26) 6 ಗಂಟೆಗೆ ಮುಕ್ತಾಯಗೊಂಡಿದೆ. ಬೆಳಗ್ಗೆ ಏಳು ಗಂಟೆಗೆ ಆರಂಭಗೊಂಡ ಮತದಾನ ಪಕ್ರಿಯೆ ಸಂಜೆ 6 ಗಂಟೆಗೆ ಸರಿಯಾಗಿ ಅಂತ್ಯಗೊಂಡಿತು.

ಇವಿಎಂಗಳಿಗೆ ಸೀಲ್​

ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಗೇಟ್​ ಮುಚ್ಚಿದ್ದರು. ಈ ವೇಳೆ ಮೊದಲೇ ಬಂದು ಸರತಿಯಲ್ಲಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಅವಕಾಶ ನೀಡಲಾಯಿತು. ಕೆಲವರು ಅ ಬಳಿಕ ಬಂದರೂ ಅವರಿಗೆ ಅವಕಾಶ ನೀಡಲು ಹಿರಿಯ ಅಧಿಕಾರಿಗಳು ಒಪ್ಪಲಿಲ್ಲ. ಎಲ್ಲರೂ ಮತ ಚಲಾವಣೆ ಮಾಡಿದ ಬಳಿಕ ಹಿರಿಯ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದರು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅವರು ಮತ ಯಂತ್ರಗಳನ್ನು ಪ್ಯಾಕ್ ಮಾಡಿದರು. ಈ ಮತಪೆಟ್ಟಿಗಳು ಇನ್ನು ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಲಿದೆ.


ಎಲ್ಲಿಲ್ಲಿ ಇಂದು ಮತದಾನ!!

ಕರ್ನಾಟಕ (14 ಕ್ಷೇತ್ರ)

ಕೇರಳ (ಎಲ್ಲ 20 ಕ್ಷೇತ್ರ)

ರಾಜಸ್ಥಾನ (13 ಕ್ಷೇತ್ರ)

ಮಹಾರಾಷ್ಟ್ರ, ಉತ್ತರ ಪ್ರದೇಶ (ತಲಾ 8 ಕ್ಷೇತ್ರ)

ಮಧ್ಯಪ್ರದೇಶ (7 ಕ್ಷೇತ್ರ)

ಬಿಹಾರ, ಅಸ್ಸಾಂ, (ತಲಾ 5 ಕ್ಷೇತ್ರ)

ಛತ್ತೀಸ್‌ಗಢ, ಪಶ್ಚಿಮ ಬಂಗಾಳ(3 ಕ್ಷೇತ್ರ)

ಮಣಿಪುರ, ತ್ರಿಪುರಾ, ಜಮ್ಮು ಮತ್ತು ಕಾಶ್ಮೀರ (ತಲಾ 1 ಕ್ಷೇತ್ರ)