ಎರಡನೆಯ ಹಂತದ ಲೋಕಸಭಾ ಚುನಾವಣೆ: ಕರ್ನಾಟಕದ ಮೊದಲ ಹಂತ; ಏಪ್ರಿಲ್ 26ಕ್ಕೆ ಮತದಾನ
ಬೆಂಗಳೂರು: ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ಏಪ್ರಿಲ್.26ರಂದು ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಇದೀಗ ರಾಜ್ಯದ 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ಗೆ. ಇನ್ಮುಂದೆ ಮನೆ ಮನೆಗೆ ತೆರಳಿ ಮತಯಾಚನೆಗೆ ಮಾತ್ರವೇ ಅವಕಾಶ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಉತ್ತರ, ಕೇಂದ್ರ, ದಕ್ಷಿಣ ಲೋಕಸಭಾ ಕ್ಷೇತ್ರಗಳು, ಹಾಸನ, ಚಿಕ್ಕಬಳ್ಳಾಪುರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಏಪ್ರಿಲ್.26ರಂದು ಮತದಾನ ನಡೆಯಲಿದೆ.
ಈ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಗಾಗಲೇ ಆಯಾ ಚಿಲ್ಲಾಧಿಕಾರಿಗಳು 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಇಂದು ಸಂಜೆ.6 ಗಂಟೆಯಿಂದ ಏಪ್ರಿಲ್.26ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ.