ಲೋಕಸಭಾ ಚುನಾವಣೆ 24: ಇಂದು ಮೂರನೆಯ ಹಂತ ಮತ್ತು ಕರ್ನಾಟಕದ ಕೊನೆಯ ಹಂತದ ಮತದಾನ

ಲೋಕಸಭಾ ಚುನಾವಣೆ 24: ಇಂದು ಮೂರನೆಯ ಹಂತ ಮತ್ತು ಕರ್ನಾಟಕದ ಕೊನೆಯ ಹಂತದ ಮತದಾನ 


ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬ, ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯಲಿದೆ. ಏಪ್ರಿಲ್ 19 ಮತ್ತು ಏಪ್ರಿಲ್ 26 ರಂದು ಮೊದಲ ಎರಡು ಹಂತಗಳ ಮತದಾನ ಮುಗಿದ ನಂತರ, 18 ನೇ ಲೋಕಸಭೆಯ ಮೂರನೇ ಹಂತದ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ.

ಮೂರನೇ ಹಂತದಲ್ಲಿ 10 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ 94 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಕರ್ನಾಟಕ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸಹಿತ ಪ್ರಮುಖ ರಾಜ್ಯಗಳಲ್ಲಿ 3 ನೇ ಹಂತದಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ, ಎರಡನೇ ಹಂತದ ಮತದಾನದಲ್ಲಿ ರಾಜ್ಯದಲ್ಲಿ ಈಗಾಗಲೇ 14 ಕ್ಷೇತ್ರಗಳ ಮತದಾನ ಮುಕ್ತಾಯವಾಗಿದೆ. ಇಂದು ಉಳಿದ 14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.


ಮೇ 7ರಂದು ಎಲ್ಲೆಲ್ಲಿ ಮತದಾನ?


ಬೆಳಗಾವಿ

ಬಳ್ಳಾರಿ

ಚಿಕ್ಕೋಡಿ

ಹಾವೇರಿ-ಗದಗ

ಕಲಬುರಗಿ

ಬೀದರ್​

ಹುಬ್ಬಳಿ – ಧಾರವಾಡ

ಕೊಪ್ಪಳ

ರಾಯಚೂರು

ಉತ್ತರ ಕನ್ನಡ

ದಾವಣಗೆರೆ

ಶಿವಮೊಗ್ಗ

ಬಾಗಲಕೋಟೆ

ವಿಜಯಪುರ

Previous Post Next Post