ರಾಜ್ಯದಲ್ಲಿ ಮೇ 31 ರಿಂದ ಮುಂಗಾರು ಮಳೆ ಆರಂಭ: ಹಲವಡೆ ಧಾರಾಕಾರ ಮಳೆ
ಬೆಂಗಳೂರು ಮೇ 26: ರಾಜ್ಯದಲ್ಲಿ ಏಪ್ರಿಲ್ ತಿಂಗಳ ಬಿಸಿಲ ಝಳ ಕಡಿಮೆಯಾಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು ತಂಪಾದ ವಾತಾವರಣ ನಿರ್ಮಾಣವಾಗಿದೆ. ಧಾರಾಕಾರ ಮಳೆ ಪ್ರಕೃತಿಯ ಸೊಬಗನ್ನು ಹೆಚ್ಚಿಸಿದೆ. ಈ ನಡುವೆ ಸಿಹಿ ಸುದ್ದಿಯೊಂದನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯಕ್ಕೆ ಮೇ ತಿಂಗಳಲ್ಲೇ ಮುಂಗಾರು ಮಳೆ ಆಗಮಿಸಲಿದೆ. ಅಂದರೆ ಮೇ 31ರಿಂದ ರಾಜ್ಯದಲ್ಲಿ ಮುಂಗಾರು ಶುರುವಾಗಲಿದೆ. ನೈರುತ್ಯ ಮುಂಗಾರು ಮಳೆ ಮೇ 31ಕ್ಕೂ ಮುನ್ನ ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದ್ದು ಮೇ ತಿಂಗಳ ಕೊನೆ ವಾರದಲ್ಲಿ ಕೇರಳ ಕರಾವಳಿಗೆ ಆಗಮಿಸಲಿದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಪ್ರವೇಶಿಸಲಿದೆ. ಅಲ್ಲದೆ ಈ ಬಾರಿ ನಿರೀಕ್ಷೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.