ಪ್ರಧಾನಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ

ಪ್ರಧಾನಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ


ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ (Resignation) ಸಲ್ಲಿಸಿದರು. ರಾಷ್ಟ್ರಪತಿಗಳು ರಾಜೀನಾಮೆ ಅಂಗೀಕರಿಸಿದ್ದಾರೆ.


17ನೇ ಲೋಕಸಭೆ ವಿಸರ್ಜನೆಯ (Lok Sabha dissolvation) ಆಗಬೇಕಿರುವ ಹಿನ್ನೆಲೆಯಲ್ಲಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ದೊಡ್ಡ ಪಕ್ಷವಾಗಿ ಹೊಮ್ಮಿರುವ ಎನ್‌ಡಿಎ (NDA) ಸರಕಾರ ರಚನೆಯ ಹಕ್ಕು ಮಂಡಿಸಬೇಕಿದೆ. ಮಿತ್ರಪಕ್ಷಗಳ ಜೊತೆಗೆ ಸಮಾಲೋಚನೆಯ ಬಳಿಕ ಮೋದಿಯವರು ರಾಷ್ಟ್ರಪತಿಗಳ ಮುಂದೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ. ರಾಷ್ಟ್ರಪತಿಗಳು ಮುಂದಿನ ನೂತನ ಪ್ರಧಾನಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

Previous Post Next Post