ಉಲಮಾ ಕೋರ್ಡಿನೇಶನ್ ಕರೆ ಕೊಟ್ಟಿರುವ ಬೃಹತ್ ವಖ್ಫ್ ಸಂರಕ್ಷಣಾ ಪ್ರತಿಭಟನೆ ಇಂದು
ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂ ರಿನ ಶಾ ಗಾರ್ಡನ್ನಲ್ಲಿ ಎ.18ರಂದು ಇಂದು ಪ್ರತಿಭಟನಾ ಸಮಾವೇಶ ನಡೆಯಲಿದೆ. ದ.ಕ ಮತ್ತು ಉಡುಪಿ ಜಿಲ್ಲಾಖಾಝಿಗಳ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ.
ಮಧ್ಯಾಹ್ನ 3 ಕ್ಕೆ ಕಣ್ಣೂರು ದರ್ಗಾ ಝಿಯಾರತ್ ನಡೆಯಲಿದೆ. ಸಂಜೆ 4ಕ್ಕೆ ಸಭಾ ಕಾರ್ಯ ಕ್ರಮ ನಡೆಯಲಿದೆ.
ಡಾ|ಎಂ.ಎಸ್.ಎಂ. ಝೈನಿ ಕಾಮಿಲ್ ಮಾತನಾಡಿ, ಭಾರತದ ರಾಷ್ಟ್ರಧ್ವಜ ಕಟ್ಟಿಕೊಂಡು ಬರುವ ವಾಹನಗಳಿಗೆ ಪ್ರವೇಶವಿದೆ. ಸಮಾವೇಶಕ್ಕೆ ಬರಲು ಪಂಪ್ವೆಲ್ ಮತ್ತು ಬಿ.ಸಿ.ರೋಡ್ನಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದರು.
ಯು.ಕೆ. ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಮಾತನಾಡಿ, ವಕ್ಫ್ ಬಗ್ಗೆ ಜನರಲ್ಲಿ ತಪ್ಪುಭಾವನೆ ಮೂಡಿಸುವ ಪ್ರಯತ್ನ ನಡೆದಿದ್ದು, ಅದನ್ನು ಹೋಗಲಾಡಿಸಲು ಪ್ರಯತ್ನಿಸಲಾಗುವು ದು ಎಂದರು. ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ, ಖಾಸಿಂ ದಾರಿಮಿ ಕಿನ್ಯ ಮತ್ತಿತರರಿದ್ದರು.
ಪ್ರತಿಭಟನ ಸಮಾವೇಶ; ಪೊಲೀಸರಿಂದ ಹಲವೆಡೆ ಬಿಗು ಭದ್ರತೆ
ಪ್ರತಿಭಟನಾ ಸಮಾವೇಶದ ಹಿನ್ನೆಲೆಯಲ್ಲಿ ಪೊಲೀಸ್ ಬಿಗು ಭದ್ರತೆ ಕೈಗೊಳ್ಳಲಾಗಿದೆ. ಗುರುವಾರ ಸಂಜೆಯಿಂದಲೇ ಸಮಾವೇಶ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ರಾ.ಹೆ.73ರಲ್ಲಿ ವಾಹನ ದಟ್ಟನೆ ಉಂಟಾಗುವ ಸಾಧ್ಯತೆಯಿದ್ದು, ಸುಗಮ ಸಂಚಾರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ಸ್ಥಳೀಯ, ತುರ್ತು ಹಾಗೂ ಅಗತ್ಯ ವಾಹನಗಳನ್ನು ಹೊರತು ಪಡಿಸಿ ಇತರ ವಾಹನಗಳನ್ನು ಮಾರ್ಗಗಳನ್ನು ಬದಲಾಯಿಸಿ ಸಂಚರಿಸಲು ಈಗಾಗಲೇ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.