ಸಂಜೆ 5 ಗಂಟೆಯಿಂದಲೇ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದು, ಮೇ.12ರಂದು ಭಾರತದ ಡಿಜಿಒಎಂ ಮತ್ತು ಪಾಕಿಸ್ತಾನದ ಡಿಜಿಒಎಂ ನಡುವೆ ಮಾತುಕತೆ ನಡೆಯಲಿದೆ. ಹೀಗಾಗಿ ಸದ್ಯಕ್ಕಂತೂ ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಮೇ.12ರಂದು ಉಭಯ ದೇಶಗಳ ನಡುವೆ ಯಾವ ರೀತಿಯಲ್ಲಿ ಮಾತುಕತೆ ನಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಇಂದು ಮಧ್ಯಾಹ್ನ 3:35 ಗಂಟೆಗೆ ಭಾರತೀಯ ಡಿಜಿಎಂಒ ಅವರಿಗೆ ಮಾತುಕತೆಗೆ ಕರೆದರು. ಭಾರತೀಯ ಸಮಯ 17.00 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ, ಗಾಳಿ ಮತ್ತು ಸಮುದ್ರದಲ್ಲಿ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಅವರ ನಡುವೆ ಒಪ್ಪಂದ ಮಾಡಿಕೊಳ್ಳಲಾಯಿತು.
ಭವಿಷ್ಯದಲ್ಲಿ ಭಯೋತ್ಪಾದನಾ ದಾಳಿಯನ್ನು ಯುದ್ಧವೆಂದೇ ಪರಿಗಣಿಸಲಾಗುವುದು: ಭಾರತದಿಂದ ಕಠಿಣ ಸಂದೇಶ
ನವದೆಹಲಿ: ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧ ಕೃತ್ಯವೆಂದು ಪರಿಗಣಿಸಲು ಭಾರತ ನಿರ್ಧರಿಸಿದೆ. ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನ ಅಪ್ರಚೋದಿತ ಆಕ್ರಮಣದಿಂದಾಗಿ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಗಗನಕ್ಕೇರಿರುವಂತೆಯೇ, ದೇಶದಲ್ಲಿ ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.